ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಯುವ ದಿನ’ ಆಚರಿಸಲಾಯಿತು. ವಿವಿಧ ಮಹಾವಿದ್ಯಾಲಯಗಳ ಪ್ರಾಧ್ಯಾಪಕರು, ವಿಶ್ವವಿದ್ಯಾಲಯ ಕುಲಪತಿ ಸಹಿತ ಶಿಕ್ಷಣ ತಜ್ಞರ ಪಾಲ್ಗೊಳ್ಳುವಿಕೆಯಿಂದಾಗಿ ಕಾರ್ಯಕ್ರಮಕ್ಕೆ ಹೆಚ್ಚಿನ ಮಹತ್ವ ಬಂತು.
ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಾಡಪಡಿತ್ತಾಯ ಅವರು, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯ ಮಹತ್ವದ ಸಂಗತಿಗಳನ್ನು ವಿದ್ಯಾರ್ಥಿಗಳ ಮುಂದಿಟ್ಟರು.
ಕಾಲೇಜಿನ ಪ್ರಾಂಶುಪಾಲ ಕೃಷ್ಣ ಕಾಂಚನ್, ಪರಮೇಶ್ವರ್, ಈಶ್ವರ ಕಟೀಲು, ಭಾಸ್ಕರ ದೇವಸ್ಯ, ಕೆ ರಾಘವೇಂದ್ರ ಭಟ್, ಸಂತೋಷ ಆಳ್ವ ಸಹಿತ ಗಣ್ಯರನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.