ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾತ್ಮಾ ಗಾಂಧಿ ಹುತಾತ್ಮ ದಿನದ ಅಂಗವಾಗಿ ಇಂದು ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಇರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವ ಆರ್ ಅಶೋಕ, ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ್, ಎನ್ ರವಿಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಎಸಿಎಸ್ ರಾಕೇಶ್ ಸಿಂಗ್ ಮತ್ತು ಇತರರು ಉಪಸ್ಥಿತರಿದ್ದರು.