ಬೆಂಗಳೂರು: ಕಾಗಿನೆಲೆ ಕನಕಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಭೇಟಿ ಮಾಡಿ ಚರ್ಚಿಸಿದರು.
ಉಪ್ಪಾರ,ಮಡಿವಾಳ ಶ್ರೀ ಗಳು ಸೇರಿದಂತೆ ಹಲವಾರು ಹಿಂದುಳಿದ ವರ್ಗಗಳ ಮಠಾಧೀಶರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.