ಬೆಂಗಳೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಕರ್ನಾಟಕದ ಸ್ತಬ್ದಚಿತ್ರ “ಸಾಂಪ್ರದಾಯಕ ಕರಕುಶಲ ವಸ್ತುಗಳ ತೊಟ್ಟಿಲು” ಸ್ಪರ್ಧೆಯಲ್ಲಿ ಎರಡನೇ ಸ್ಥಾನಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ಸೂಚಿಸಿದ್ದಾರೆ.
ಈ ಗೌರವ ಕನ್ನಡನಾಡಿಗೆ ಮತ್ತು ಕನ್ನಡಿಗರೆಲ್ಲರಿಗೆ ಸಂದಿದೆ. ಇದು ನಮ್ಮ ರಾಜ್ಯದ ಕರಕುಶಲಕರ್ಮಿಗಳಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಿ ಎಂದು ಅವರು ಆಶಿಸಿದ್ದಾರೆ.