ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ಹಾಗೂ ಅನಂತರದ ಘಟನೆಗಳನ್ನು ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಹಿಂಸಾ ರಾಜಕಾರಣ ಎಂದು ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎನ್ನುವುದು ಸರಕಾರಕ್ಕೆ ನನ್ನ ಒತ್ತಾಯ ಎಂದವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತವೆ. ಇಂಥ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ. 2/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 21, 2022
ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತವೆ. ಇಂಥ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ ಎಂದವರು ಪ್ರತಿಕ್ರಿಯಿಸಿದ್ದಾರೆ.
ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ 'ಹಿಂಸಾ ರಾಜಕಾರಣ'ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ. 3/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 21, 2022
ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ ‘ಹಿಂಸಾ ರಾಜಕಾರಣ’ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ ಎಂದು ಆರೋಪಿಸಿರುವ ಅವರು, ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ. ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿದ್ದಾರೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ 'ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ'ಕ್ಕೆ ಕ್ಷಮೆಯೇ ಇಲ್ಲ. 5/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 21, 2022
ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿದ್ದಾರೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ಕ್ಷಮೆಯೇ ಇಲ್ಲ ಎಂದವರು ಹೇಳಿದ್ದಾರೆ.
ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? 6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 21, 2022
ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? ಎಂಬುದು ಅವರ ಪ್ರಶ್ನೆ.