ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಡ ಹೆಚ್ಚಾಗಿದೆ. ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಭಜರಂಗದಳದ ಮುಂಚೂಣಿ ಕಾರ್ಯಕರ್ತ ಹರ್ಷಾ ಅವರನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಘಟನೆ ನಂತರ ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ಈ ಕೃತ್ಯವನ್ನು ಖಂಡಿಸಿರುವ ಮುಖಂಡರು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಹರ್ಷಾ ಕೊಲೆ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ ಬೆನ್ನಲ್ಲೇ ಸಚಿವ ಈಶ್ವರಪ್ಪ ಕೂಡಾ ಅದೇ ರೀತಿ ಆಗ್ರಹ ಮುಂದಿಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಗೋ ರಕ್ಷಣೆ ಮಾಡುವ ಹಿಂದೂ ಹುಡುಗರನ್ನು ಕೊಲೆ ಮಾಡುತ್ತಿದ್ದರು. ಈಗ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಹಿಂದೂ ಯುವಕರ ಕೊಲೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ, ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್‌ಐಎ ಮೂಲಕ ಮಾಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇನ್ನೊಂದೆಡೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹರ್ಷನ ಹತ್ಯೆ ಬಗ್ಗೆ ಎನ್‌ಐಎ ಮೂಲಕ ತನಿಖೆ ನಡೆಯಬೇಕಿದೆ ಎಂದಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐಗೆ ಪ್ರತಿಕ್ರಿಯೆ ನೀಡಿದ ಅವರು, ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಹಿಂದೆ ಪಿತೂರಿ ಇದೆ. ಹಾಗಾಗಿ ಎನ್‌ಐಎ ಮೂಲಕ ತನಿಖೆ ನಡೆಸಬೇಕಿದೆ ಎಂದಿದ್ದಾರೆ.
Bajrang Dal activist Harsha was murdered y'day (in Karnataka). I think it's a conspiracy, he has been murdered under a conspiracy. A serious inquiry should be done. Govt will take up the issue seriously. If needed, case should be handed over to NIA: CT Ravi, BJP National Gen Secy pic.twitter.com/02R4DruW4l
— ANI (@ANI) February 21, 2022