ಗೃಹ ರಕ್ಷಕ ಸ್ವಯಂಸೇವಕರ ಕರ್ತವ್ಯ ಭತ್ಯೆ ಹೆಚ್ಚಿಸಿದ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಹೊರತುಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ೩೦೨೫ ಗೃಹ ರಕ್ಷಕ ಸ್ವಯಂಸೇವಕರ ಭತ್ಯೆಯನ್ನು ಹೆಚ್ಚಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ.
“ಸರಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತೆ ಆಗಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಹೊರತು ಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸರಿ ಸುಮಾರು ೩೦೨೫ , ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ ೬೦೦ ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಸದರಿ ಗೃಹ ರಕ್ಷರನ್ನು ವರ್ಷದಲ್ಲಿ 353 ದಿನಗಳ ಕಾಲ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿ ರುವುದರಿಂದ ಬೆಂಗಳೂರು ನಗರದಲ್ಲಿ ರೂಪಾಯಿ 455 ರಿಂದ ರೂಪಾಯಿ 600 ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ರೂಪಾಯಿ 380 ರಿಂದ ರೂ 600 ಕ್ಕೆ ಹೆಚ್ಚಳ ಮಾಡಬಹುದೆಂದು ಪ್ರಸ್ತಾವನೆ ಮಾಡಲಾಗಿದೆ.