ಬೆಂಗಳೂರು: ಪಾವಗಡ ಬಸ್ ಅಪಘಾತ ನಂತರ ಎಚ್ಚೆತ್ತ ಸರ್ಕಾರ: ಮಿತಿಗಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳ ವಿರುದ್ದ ಕ್ರಮಕ್ಕೆ ಮುಂದಾಗಿದೆ.
ಪಾವಗಡ ಬಸ್ ಅಪಘಾತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಶಾಲಾ ಕಾಲೇಜುಗಳು ಇರುವ ಸಂದರ್ಭದಲ್ಲಿ ಬಸ್ ಗಳಲ್ಲಿ ಅದರ ಮಿತಿಗಿಂತ ಹೆಚ್ಚಿನ ಜನರನ್ನು ಒಯ್ಯುವ ಬಸ್ ಗಳನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ. ಅಂಥ ಬಸ್‌ಗಳ ಲೈಸೆನ್ಸ್ ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಇಂತಹ ಬಸ್ ಗಳು ಸಂಚರಿಸುವ ಮಾರ್ಗದಲ್ಲಿ ನಿರಂತರ ತಪಾಸಣೆ ಮಾಡಲೂ ಸಹ ಸೂಚಿಸಲಾಗಿದೆ ಎಂದರು.
ಅಪಘಾತದಲ್ಲಿ ಗಾಯಗೊಂಡವರನ್ನು ಅವಶ್ಯಕತೆ ಇದ್ದಲ್ಲಿ ಬೆಂಗಳೂರಿಗೆ ಸ್ಥಳಾಂತರಿಸಲು ತಿಳಿಸಲಾಗಿದೆ ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.