ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗದುಗಿನ ತ್ರಿವಿಧ ದಾಸೋಹಮೂರ್ತಿ ಲಿಂಗೈಕ್ಯ ಶ್ರೀ ಜಗದ್ಗುರು ಡಾ. ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಐಕ್ಯಮಂಟಪವನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೊಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕೃಷಿ ಹಾಗೂ ಜಿಲ್ಕಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಶಾಸಕ ಕಳಕಪ್ಪ ಬಂಡಿ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದುರದುಂಡಿಶ್ವರ ಮಠ ಅರಬಾವಿ, ಶ್ರೀ. ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ತೋಂಟದಾರ್ಯ ಶಾಖಾಮಠ ಮುಂಡರಗಿ-ಬೈಲೂರ, ಶ್ರೀ ಗುರುಬಸವ ಮಹಾಸ್ವಾಮಿಗಳು ತೋಂಟದಾರ್ಯ ಶಾಖಾ ಮಠ ಶಿರೋಳ, ಶ್ರೀ.ಶಾಂತಲಿಂಗ ಮಹಾಸ್ವಾಮಿಗಳು ದೊರೆಸ್ವಾಮಿ ವೀರಕ್ತಮಠ ಭೈರನಟ್ಟಿ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾದ್ಯಕ್ಷೆ ಸುನಂದಾ ಬಾಕಳೆ, ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿ.ಪಂ.ಸಿ.ಇ.ಒ. ಡಾ.ಸುಶೀಲಾ.ಬಿ, ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.