ಕಲಬುರಗಿ: ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು ಈಗಾಗಲೇ ಹೊರಡಿಸಲಾಗಿದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟು ಡೆಸಿಬಲ್ ಇರಬೇಕು ಎಂದು ಕಾನೂನು ಇದೆ. ಡಿಜಿಯವರು ಸುತ್ತೋಲೆ ಹೊರಡಿಸಿದ್ದಾರೆ ಎಂದರು.
ಪಕ್ಷದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ಇದೆ. ಪಕ್ಷದಲ್ಲಿ ಯಾವ ಅಸಮಾಧಾನವೂ ಇಲ್ಲ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ಬಗೆಹರಿಸಿಕೊಂಡಿದ್ದೇವೆ. ಹಿಂದೆಂದಿಗಿಂತಲೂ ಹೆಚ್ಚಿನ ಒಗ್ಗಟ್ಟು ನಮ್ಮಲ್ಲಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ವಿಶ್ವಾಸವಿದೆ ಎಂದರು.