ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೀಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಅವರು, ಪಿ.ಎಸ್.ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೀಡಿಯೋ ವೈರಲ್ ಆಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹತ್ತು ಹಲವಾರು ಪ್ರಕರಣಗಳು ಹೊರಬೀಳುತ್ತಿವೆ. ಆಡಿಯೋ, ವೀಡಿಯೋ ಪರೀಕ್ಷೆ ಗಳಲ್ಲಿ ಅಕ್ರಮ ಎಸಗುವ ವಿಧಾನಗಳು ಹೊರಬೀಳುತ್ತಿವೆ. ಸಿಐಡಿ ಸಮಗ್ರ ತನಿಖೆ ಮಾಡುವಂತೆ ಸೂಚಿಸಿದೆ. ಯಾರೇ ಇರಲಿ, ಎಷ್ಟೇ ಪ್ರಭಾವಿಗಳು, ಚಾಣಾಕ್ಷರಿರಲಿ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕೆಂದು ಆದೇಶ ನೀಡಲಾಗಿದೆ ಎಂದರು.
ಪಿ.ಎಸ್.ಐ ನೇಮಕಾತಿ ನ್ಯಾಯಸಮ್ಮತವಾಗಿ ಆದರೆ ನ್ಯಾಯಸಮ್ಮತ ಪೊಲೀಸ್ ಪಡೆ ನಿರ್ಮಾಣವಾಗುತ್ತದೆ ಎಂದರು. ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಪ್ರಕರಣದಲ್ಲಿ ಕೈಗೊಂಡಂತೆ ಹಲವಾರು ಕಾನೂನಿನ ಬಲವೂ ಇದೆ. ಇದು ಕರ್ನಾಟಕ ಮಾದರಿ. ದಿವ್ಯಾ ಹಾನರಗಿ ಇನ್ನೂ ಬಂಧನಕ್ಕೊಳಗಾಗಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರ ಸಂಸ್ಥೆ, ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದರು.