ಬೆಂಗಳೂರು: ಉದ್ಯಾನ ನಗರಿಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಕೆ.ಅರ್.ಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೆಲ ಪ್ರದೇಶಗಳಲ್ಲಿ ಹಾನಿ ಸಂಭವಿಸಿದೆ.
ಗುರುವಾರ ಬೆಂಗಳೂರು ನಗರ ಪ್ರದಕ್ಷಿಣೆ ಮೂಲಕ ಪರಿಸ್ಥಿತಿ ಅವಲೋಕಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಶುಕ್ರವಾರ ಬೆಳಗ್ಗೆ ಕೆ.ಅರ್.ಪುರ ಸುತ್ತ ಮುತ್ತ ಪ್ರದೇಶಗಳಿಗೆ ಭೇಟಿ ನೀಡಿದರು. ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರೊಂದಿಗೆ ಸಾಯಿ ಬಡಾವಣೆ, ಪೈ ಬಡಾವಣೆ, ನಾಗಪ್ಪ ಬಡಾವಣೆ, ಹೊರ ಮಾವು ಸೇರಿದಂತೆ ಹಲ ಪ್ರದೇಶಗಳಲ್ಲಿ ಸಂಚರಿಸುವ ಮೂಲಕ ಅಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.
ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಅಯುಕ್ತ ತುಷಾರ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಸಿಎಂ ಅವರಿಗೆ ಮಾಹಿತಿ ನೀಡಿದರು.

























































