ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿರುವ ಜಬ್ಬಾರ್ ಹಾಗೂ ಹಿಂದುಳಿದ ಯಾದವ ಸಮುದಾಯದ ನಾಯಕ ನಾಗರಾಜ್ ಯಾದವ್ ಅವರಿಗೆ ಎಐಸಿಸಿ ಟಿಕೆಟ್ ಘೋಷಿಸಿದೆ. ಈ ಬಾರಿ ಪರಿಷತ್ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಹಿಂದುಳಿದ ವರ್ಗದವರಿಗೆ ಹಾಗೂ ಮತ್ತೊಂದು ಸ್ಥಾನವನ್ನು ಅಲ್ಪಸಂಖ್ಯಾತ ಸಮುದಾಯದವರಿಗೆ ನೀಡುವಂತೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಮನವಿ ಮಾಡಿದ್ದರು. ಈ ಮನವಿಯಂತೆ ಎಐಸಿಸಿ ಅಭ್ಯರ್ಥಿಗಳನ್ನು ಘೋಷಿಸಿದೆ.
























































