ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು.
ನಿರ್ಮಲಾ ಸೀತಾರಾಮನ್ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರು ಮತ್ತು ಶಾಸಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕರ್ನಾಟಕದಿಂದ ಸ್ಪರ್ಧಿಸಲು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಎರಡು ಕ್ಷೇತ್ರಗಳನ್ನು ನಾವು ಗೆಲ್ಲುವವರಿದ್ದೇವೆ. ಲೆಹರ್ ಸಿಂಗ್ ಅವರು ಸ್ಪರ್ಧಿಸಿದ ಇನ್ನೊಂದು ಕ್ಷೇತ್ರವನ್ನೂ ಗೆಲ್ಲಲು ನಾವು ಎಲ್ಲ ಪ್ರಯತ್ನ ಮಾಡಿ ಅದನ್ನೂ ಗೆಲ್ಲುತ್ತೇವೆಂಬ ವಿಶ್ವಾಸವಿದೆ. ಹೀಗೆ ರಾಜ್ಯಸಭೆಗೆ ಮೂರು ಜನರನ್ನು ಆಯ್ಕೆ ಮಾಡಲು ನಾವೆಲ್ಲರೂ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.


















































