ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು. ಹೆಬ್ರಿ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ , ಗೋವಿಂದ ಕಾರಜೋಳ , ಸುನಿಲ್ ಕುಮಾರ್ , ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಸುಕುಮಾರ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ, ರಾಜ್ಯ ಗೇರು ಬೀಜ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.


















































