ವಿಜಯಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಖಚಿತ, ಗೆಲ್ಲುವುದೂ ನಿಶ್ಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದ ಬಗ್ಗೆ ಪ್ರತಿಕ್ರಿಯಿಸಿದರು. ಒಂದೇ ಕುಟುಂಬದವರಿಗೆ ಟಿಕೇಟ್ ಕೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನ ತೆಗೆದುಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಆದರೆ ವಿಧಾನಸಭಾ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸಲಿದ್ದು, ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲ್ಲಲಿದ್ದಾರೆ ಎಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.
ಮೇಲ್ಮನೆಗೆ ಸ್ಪರ್ಧಿಸಲು ಪುತ್ರ ವಿಜಯೇಂದ್ರಗೆ ಟಿಕೆಟ್ ಕೊಡಿಸಲು ಯಡಿಯೂರಪ್ಪ ಅವರಿಂದ ಸಾಧ್ಯವಾಗಿಲ್ಲ. ಬಿಜೆಪಿಯು ಯಡಿಯೂರಪ್ಪ ಅವರನ್ನು ಪಕ್ಕಕ್ಕೆ ಸರಿಸಿದೆ ಎಂಬ ಸಿದ್ಧರಾಮಯ್ಯ ಹೇಳಿಕೆ ಕುರಿತಂತೆ ತಮ್ನದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ ಬಿಎಸ್‌ವೈ, ಪ್ರತಿಪಕ್ಷ ನಾಯಕರ ಹೇಳಿಕೆಗೆ ಅರ್ಥವಿಲ್ಲ ಎಂದರು.


























































