ಬೆಂಗಳೂರು: ಕನಕಪುರ ರಸ್ತೆ ವಸಂತಪುರದಲ್ಲಿ ಇಸ್ಕಾನ್ ಸಂಸ್ಥೆ ವತಿಯಿಂದ ನಿರ್ಮಾಣ ಮಾಡಲಾಗಿರುವ ತಿರುಮಲ ಮಾದರಿಯ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವನ್ನು ಗೌರವಾನ್ವಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಾರ್ಪಣೆ ಮಾಡಿದರು.
https://youtu.be/MCWX8UQqGyQ
ಸಮಾರಂಭದಲ್ಲಿ ರಾಷ್ಟ್ರಪತಿಯವರ ಪತ್ನಿ ಸವಿತಾ ಕೋವಿಂದ್, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಎಂ ಕೃಷ್ಣಪ್ಪ, ಇಸ್ಕಾನ್ ಸಂಸ್ಥೆಯ ಅಧ್ಯಕ್ಷ ಮಧುಪಂಡಿತ ದಾಸ್ ಹಾಗೂ ಗಣ್ಯರನೇಕರು ಉಪಸ್ಥಿತರಿದ್ದರು.




















































