ಬೆಂಗಳೂರು: ರಾಜ್ಯದ ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ ಎಂದಿದ್ದಾರೆ.
ರಾಜ್ಯದ ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ’ಯನ್ನು ‘ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರು ನಾಮಕರಣ ಮಾಡಲಾಗಿದೆ.
12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು
‘ರಾಷ್ಟ್ರೀಯ ಶಿಕ್ಷಣ ನೀತಿ-2020’ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ.@BSBommai pic.twitter.com/wHfxa98npk
— B.C Nagesh (@BCNagesh_bjp) June 24, 2022
;


























































