ಬೆಂಗಳೂರು: ಡಾ|| ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವೈದ್ಯಕೀಯ ಪ್ರಕೋಷ್ಠದ ವತಿಯಿಂದ “ಉಚಿತ ವೈದ್ಯಕೀಯ ತಪಾಸಣಾ ಶಿಬಿರ” ನಡೆಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯದ ತೋಟಗಾರಿಕಾ ಸಚಿವ ಎನ್. ಮುನಿರತ್ನ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಜಿ. ಮಂಜುನಾಥ್ ಮತ್ತು ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಡಾ|| ಜಯಕರ ಶೆಟ್ಟಿ ಅವರು ಭಾಗವಹಿಸಿದ್ದರು.
ಡಾ|| ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನ
ಇದಕ್ಕೂ ಮೊದಲು ನಡೆದ ಡಾ|| ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯದ ತೋಟಗಾರಿಕಾ ಸಚಿವ ಎನ್. ಮುನಿರತ್ನ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಡಾ|| ಜಯಕರ ಶೆಟ್ಟಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಡಾ|| ಶ್ಯಾಮಪ್ರಸಾದ್ ಮುಖರ್ಜಿ ಅವರ ತ್ಯಾಗ ಮತ್ತು ಬಲಿದಾನವನ್ನು ಈ ಸಂದರ್ಭದಲ್ಲಿ ನೆನಪಿಸಿ ಅದನ್ನು ಅನುಷ್ಠಾನಕ್ಕೆ ತರಲು ಅತಿಥಿಗಳು ಮನವಿ ಮಾಡಿದರು.