ಮಂಗಳೂರು: ರಾಜ್ಯದ ಕರಾವಳಿ ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದ್ದು ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಈ ನಡುವೆ, ಕರಾವಳಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 7ರಂದೂ ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ನಿರಂತರ ವರ್ಷಧಾರೆಯ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳಿಗೆ, ಶಾಲಾ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.







































































