ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಕರಾವಳಿ ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ.
ಕರಾವಳಿ ಜಿಕ್ಲೆಗಳಲ್ಲು ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜುಲೈ 9 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾನುವಾರದಿಂದ 13ರವರೆಗೆ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.























































