ಬೆಂಗಳೂರು: ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಎನ್‌ಡಿಎ ಅಭ್ಯರ್ಥಿ ದೌಪದಿ ಮುರ್ಮು ಅವರು ಪ್ರಚಾರ ಯಾತ್ರೆಯನ್ನು ಬಿರುಸುಗೊಳಿಸಿದ್ದಾರೆ. ಇಂದು ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ದೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಸ್ವಾಗತಿಸಿದರು.
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿಯಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ @nalinkateel ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಆತ್ಮೀಯವಾಗಿ ಸ್ವಾಗತಿಸಿದರು.#KarnatakaWelcomesDroupadiMurmu pic.twitter.com/L7n0kfY7Rl
— BJP Karnataka (@BJP4Karnataka) July 10, 2022

























































