ಬೆಂಗಳೂರು: ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು, ಸಂಸತ್ ಅಧಿವೇಶನವಿದ್ದರೂ ಜು.21 ರಂದು ಸೋನಿಯಾ ಗಾಂಧಿಯವರನ್ನು ಇಡಿ ತನಿಖೆಗೆ ಕರೆದಿದ್ದಾರೆ ಎಂದು ದೂರಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರನ್ನು 50 ಗಂಟೆ ತನಿಖೆ ಮಾಡಿದ್ದರು. ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ನಮ್ಮ ನಾಯಕಿಗೆ ಧೈರ್ಯ ತುಂಬುವ ಕೆಲಸ ಮಾಡುವ ಸಲುವಾಗಿ. ಈ ತಿಂಗಳ 21ರಂದು ಬೃಹತ್ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಮಾಧ್ಯಮಗೋಷ್ಠಿ. https://t.co/L9fdgLPNG5
— Karnataka Congress (@INCKarnataka) July 17, 2022
ಎಲ್ಲ ಶಾಸಕರು, ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಅಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೆ ಪ್ರತಿಭಟನೆ ಮಾಡುತ್ತೇವೆ ಎಂದ ಅವರು, 22ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು.




















































