ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ನಾಯಕನ ಕೊಲೆ ಪ್ರಕರಣ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ನಡೆದಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ?
ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರಕಾರ ಮೈಮರೆತಿದ್ದು ಯಾಕೆ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ @BJP4Karnataka ಸರಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ?
ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ. 2/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 27, 2022
ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ?
ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದಿರುವ ಹೆಚ್ಡಿಕೆ, ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು. 4/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 27, 2022
ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು? ಎಂದು ಪ್ರಶ್ನಿಸಿದ್ದಾರೆ.
ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ. 6/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 27, 2022
ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ ಎಂದು ಆರೋಪಿಸಿರುವ ಅವರು, ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ ಎಂದಿದ್ದಾರೆ.

























































