ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಕುರಿತಂತೆ ಪ್ರತಿಕ್ರಿಯಿಸಿದರು. ಈ ಮೈದಾನದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕಾನೂನಿನ ಪ್ರಕಾರ ಕೈಗೊಳ್ಳಲಾಗುವುದು ಎಂದರು. ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

























































