ಬೆಂಗಳೂರು: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟವಾಗಿದೆ ಎಂದು ಅವರು ದುಃಖ ಹಂಚಿಕೊಂಡಿದ್ದಾರೆ. https://t.co/H8LoVyv5Dr
ಸುಬ್ಬಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು, ಅವರ ಸಂಗೀತ ಪರಿವಾರ ಹಾಗೂ ನಾಡಿನ ಜನತೆಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.2/2#ಶ್ರೀ_ಶಿವಮೊಗ್ಗ_ಸುಬ್ಬಣ್ಣ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 12, 2022
ಸುಬ್ಬಣ್ಣ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು, ಅವರ ಸಂಗೀತ ಪರಿವಾರ ಹಾಗೂ ನಾಡಿನ ಜನತೆಗೆ ಆ ಭಗವಂತ ಕರುಣಿಸಲಿ ಎಂದು ಹೆಚ್ಡಿಕೆ ಪ್ರಾರ್ಥಿಸಿದ್ದಾರೆ.























































