ಬೆಂಗಳೂರು: ಕಳೆದ ಮೂರು ವರ್ಷಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಭಿನಂದನೆ ತಿಳಿಸಿದ್ದಾರೆ.
ಆಗಸ್ಟ್ 28ಕ್ಕೆ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರ್ಣಗೊಳಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಬಲವರ್ಧನೆಯಲ್ಲಿ ತೊಡಗಿಕೊಂಡಿದ್ದರು.
ಹಗಲಿರುಳೆನ್ನದೆ ಕಾಲಿಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ ನಾಯಕರು. ಇವರ ಕಾರ್ಯವೈಖರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಸಚಿವರು ಕೊಂಡಾಡಿದ್ದಾರೆ.
ಎರಡು ವರ್ಷ ಇಡೀ ಪ್ರಪಂಚವೇ ಕೋವಿಡ್ ನಿಂದ ತತ್ತರಿಸಿದ್ದ ಸಂದರ್ಭದಲ್ಲಿ ಸಹ ಜನಸೇವೆಯಲ್ಲಿ ತೊಡಗಿಕೊಂಡಿದ್ದರು. ಕಾರ್ಯಕರ್ತರ ನಾಡಿಮಿಡಿತ ತಿಳಿದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವಂತಹ ನಾಯಕರು ಆಗಸ್ಟ್ 28ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರ್ಣಗೊಳಿಸುತ್ತಿರುವುದರಿಂದ ಅವರಿಗೆ ಮತ್ತೊಮ್ಮೆ ತುಂಬು ಹೃದಯದ ಅಭಿನಂದನೆಗಳು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.