ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದರಿಂದ ನೊಂದ ಉಪ್ಪುಂದ ಬಳಿಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂಬ ಸುದ್ದಿ ಪೋಷಕರ ಪಾಳಯದಲ್ಲಿ ತಲ್ಲಣ ಉಂಟುಮಾಡಿದೆ.
ಉಡುಪಿ ಜಿಲ್ಲೆಯ ಉಪ್ಪುಂದ ಬಳಿಯ ವಿದ್ಯಾರ್ಥಿ ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಸೇತುವೆ ಮೇಲಿಂದ ಹೊಳೆಗೆ ಹಾರಿದ್ದಾನೆಂದು ಸ್ಥಳೀಯರು ಹೇಳಿಕೊಂಡಿದ್ದಾರೆ. ಗುರುವಾರ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಿಗ್ಗೆ ವಿದ್ಯಾರ್ಥಿಯ ಮೃತ ದೇಹ ನಾವುಂದ ಬಳಿ ಕಡಲ ತೀರದಲ್ಲಿ ಪತ್ತೆಯಾಗಿದೆ. ಬೈಂದೂರು ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


























































