ದೆಹಲಿ: ಕಾಂಗ್ರೆಸ್ ಪಾಳಯದಲ್ಲಿ ಒಂದೆಡೆ ಭಾರತ್ ಜೋಡೋ ಸಂಚಾರ ಇದ್ದರೆ ಇನ್ನೊಂದೆಡೆ ಪಕ್ಷದ ಅಧ್ಯಕ್ಷರ ಚುನಾವಣೆಯ ಸಂಚಲನ ಏರ್ಪಟ್ಟಿದೆ. ಇದೇ ಸಂದರ್ಭದಲ್ಲಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧಿ ಕುಟುಂಬಕ್ಕೆ ಆಪ್ತರೂ ಆಗಿದ್ದಾರೆ. ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ರಾಜೀನಾಮೆ ನೀಡಿದ್ದಾರೆ.
‘ಏಕ ವ್ಯಕ್ತಿ ಏಕ ಹುದ್ದೆ’ ಎಂಬ ಉದಯಪುರ ನಿರ್ಣಯದಂತೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.























































