ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ , ಆಚಾರ್ಯ ಮಠ ವಠಾರದಲ್ಲಿ ೧೦೦ ನೇ ವರ್ಷ (ಶತಮಾನೋತ್ಸವ) ಆಚರಣೆ ನಡೆಯುತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವದ ಪರ್ವ ಕಾಲದಂದು ಸಹಸ್ರ ಚಂಡಿಕಾ ಮಹಾಯಾಗ ೫ ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಭಾನುವಾರ ಮಹಾಯಾಗದ ಮಹಾ ಪೂರ್ಣಾಹುತಿ ನೆರವೇರಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಅನ್ನದಾನ ಕಾರ್ಯಕ್ರಮವೂ ನೆರವೇರಿತು. ಸಾವಿರಾರು ಭಜಕರು ಜಾತಿ ಮತ ಭೇದವಿಲ್ಲದೆ ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಶಾರದೋತ್ಸವ ಸಮಿತಿಯ ಅಧ್ಯಕ್ಷ ಡಾ . ಉಮಾನಂದ ಮಲ್ಯ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪಂಡಿತ್ ನರಸಿಂಹ ಆಚಾರ್ಯ, ಅಡಿಗೆ ಬಾಲಕೃಷ್ಣ ಶೆಣೈ , ಪಂಡಿತ್ ಕಾಶೀನಾಥ್ ಆಚಾರ್ಯ, ಚಾತುರ್ಮಾಸ ಸಮಿತಿಯ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ದೇವಳದ ಮೊಕ್ತೇಸರರಾದ ಸಾಹುಕಾರ್ ಕಿರಣ್ ಪೈ, ಸತೀಶ್ ಪ್ರಭು, ಗಣೇಶ್ ಕಾಮತ್ ಮೊದಲಾದ ಗಣ್ಯರು ಈ ಕೈಂಕರ್ಯದಲ್ಲಿ ಭಾಗಿಯಾಗಿದ್ದರು..






















































