ದೆಹಲಿ: ಪಾಕ್ ಬೆಂಬಲಿತ ಉಗ್ರರು ಜಮ್ಮು ಕಾಶ್ಮೀರದಲ್ಲಿ ಪೈಶಾಚಿಕತೆ ಮೆರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕರನ್ನು ಉಗ್ರರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ತಮ್ಮ ನಿವಾಸದಲ್ಲಿ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಅಕ್ಟೋಬರ್ 3ರ ಸೋಮವಾರ ರಾತ್ರಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಗೃಹ ಸಚಿವ ಅಮಿಶ್ ಶಾ ಅವರ ಜಮ್ಮು ಕಾಶ್ಮೀರ ಭೇಟಿ ಸಂದರ್ಭದಲ್ಲಿ ಈ ಕೃತ್ಯ ನಡೆಸಿದ್ದು ಪಾಕ್ ಮೂಲದ ಉಗ್ರಗಾಮಿ ಸಂಘಟನೆಯ ಭಾರತೀಯ ಘಟಕ ಈ ಹತ್ಯೆಯ ಹೊಣೆ ಹೊತ್ತುಕೊಂಡಿದೆ. ಗೃಹಸಚಿವರಿಗೆ ಇದು ಸಣ್ಣ ಉಡುಗೊರೆಯಾಗಿದೆ ಎಂದು ಸಂಘಟನೆಯು ಸಂದೇಶ ರವಾನಿಸಿದೆ ಎನ್ಬಲಾಗಿದೆ.
ಡಿಜಿಪಿ ಹೇಮಂತ್ ಮೃತದೇಹದ ಮೇಲೆ ಸುಟ್ಟ ಗಾಯಗಳು ಕಂಡು ಬಂದಿದೆ. ಈ ನಡುವೆ ಡಿಜಿಪಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕ ಯಾಸಿರ್ ಎಂಬಾತ ನಾಪತ್ತೆಯಾಗಿದ್ದಾನೆ.



















































