ದೆಹಲಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ‘ಗಂಧದ ಗುಡಿ’ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ.
‘ಗಂಧದ ಗುಡಿ’ ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ‘ಗಂಧದ ಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು. https://t.co/VTimdGmDAM
— Narendra Modi (@narendramodi) October 9, 2022



















































