ಉಡುಪಿ: ರೈತರ ಹಿತ ಕಾಪಾಡುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಪ್ರಕಟಿಸಿರುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 1,50,593 ರೈತರು ಫಲಾನುಭವಿಗಳಾಗಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಚಿವೆ ಶೋಭಾ ಕರಂದ್ಲಾಜೆ ಅವರ ಕಚೇರಿ ಅಧಿಕಾರಿಗಳು, ಉಡುಪಿ ಜಿಲ್ಲೆಯ ಫಲಾನುಭವಿಗಳಿಗಾಗಿ 258.99 ಕೋ.ರೂ. ಕೇಂದ್ರ ಸರಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಸರ್ಕಾರ ತಿಳಿಸಿದೆ.
























































