ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಅಕ್ಟೋಬರ್ 14ರಂದು ರಾತ್ರಿ 8.10ಕ್ಕೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಿ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಇರುವರು. ಅಲ್ಲದೆ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
15ರಂದು ಅವರು ಹಾವೇರಿ, ಹಿರೇಕೆರೂರುಗಳಲ್ಲಿ ವಿವಿಧ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಅವರು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರುವರು. 16ರಂದು ಅವರು ಹುಬ್ಬಳ್ಳಿ- ಧಾರವಾಡಗಳಿಗೆ ಸಂಬಂಧಿಸಿದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೆಳಗಾವಿಗೆ ತೆರಳಿ ಅಲ್ಲಿ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಬೆಳಗಾವಿ ಕೆ.ಎಲ್.ಇ. ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಇರುವರು.
17ರಂದು ಅವರು ಚಿಕ್ಕೋಡಿಯಲ್ಲಿ ಪೂರ್ವ ನಿಗದಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ಬೆಳಗಾವಿ ವಿಮಾನನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ.
























































