ಬಳ್ಳಾರಿ: ನಮ್ಮ ಕುಟುಂಬಕ್ಕೂ ಬಳ್ಳಾರಿ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆಯು 1000 ಸಾವಿರ ಕಿಲೋ ಮೀಟರ್ ಕ್ರಮಿಸಿದ ಸಂದರ್ಭದಲ್ಲಿ ಗಣಿನಾಡು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು. ಈ ಸಮಾವೇಶದಲ್ಲಿ ಜನಸಾಗರವೇ ನೆರೆದು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ನನ್ನ ತಾಯಿ ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ, ನನ್ನ ಅಜ್ಜಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಗೆದ್ದು ಬಂದಿದ್ದರು. ಅವರು ನಿಮ್ಮೆಲ್ಲರ ವಿಶ್ವಾಸ, ಬೆಂಬಲದಿಂದ ಗೆದ್ದು ಬಂದಿದ್ದು, ನಾನಿದನ್ನು ಮರೆಯಲು ಸಾಧ್ಯವಿಲ್ಲ’ ಎಂದರು.
ನಮ್ಮ ಕುಟುಂಬಕ್ಕೂ ಬಳ್ಳಾರಿ ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ.
ನನ್ನ ತಾಯಿ ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ, ನನ್ನ ಅಜ್ಜಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಗೆದ್ದು ಬಂದಿದ್ದರು.
ಅವರು ನಿಮ್ಮೆಲ್ಲರ ವಿಶ್ವಾಸ, ಬೆಂಬಲದಿಂದ ಗೆದ್ದು ಬಂದಿದ್ದು, ನಾನಿದನ್ನು ಮರೆಯಲು ಸಾಧ್ಯವಿಲ್ಲ.
– @RahulGandhi#BharatJodoInBallari pic.twitter.com/24g5CbTp95— Karnataka Congress (@INCKarnataka) October 15, 2022
ಎಐಸಿಸಿ ನಾಯಕರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಹಿತ ಪ್ರದೇಶ ಕಾಂಗ್ರೆಸ್ ಮುಖಂಡರನೇಕರೂ ಈ ಸಮಾವೇಶದಲ್ಲಿ ಪಾಲ್ಗೊಂಡು ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಯಶಸ್ಸಾಗಿದೆ ಎಂದು ಬಣ್ಣಿಸಿದರು.






































































