ಬೆಂಗಳೂರು: ರಾಜ್ಯ ಸರ್ಕಾರಿ ಒಡೆತನದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬಹುಕಾಲದ ಬೇಡಿಕೆ ಈಡೇರಿದೆ.
ಇದೇ ಮೊದಲ ಬಾರಿಗೆ KSRTC ಸಿಬಂದಿ ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂಪಾಯಿ ಅಪಘಾತ ವಿಮೆ ಪ್ಯಾಕೇಜ್ ಸಿಗಲಿದೆ.
ಈ ಸಂಬಂಧದ ಒಡಂಬಡಿಕೆಗೆ ಬುಧವಾರ ಸಹಿ ಹಾಕುವ ಮೂಲಕ ಯೋಜನೆ ಜಾರಿಯ ಪ್ರಕ್ರಿಯೆಗೆ ಮುನ್ನುಡಿ ಬರೆಯಲಾಯಿತು.
ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಸಹಭಾಗಿತ್ವದಲ್ಲಿ ರೂಪಿಸಲಾಗಿದ್ದು, ಕೆಎಸ್ಸಾರ್ಟಿಸಿ
ನಿಗಮದ ಕೇಂದ್ರ ಕಚೇರಿಯಲ್ಲಿ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ಪಂಕಜ್ ತಪ್ಲಿಯಾಲ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು.
ಇದೇ ಮೊದಲ ಬಾರಿಗೆ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗಳಿಗೆ ರೂ.50 ಲಕ್ಷ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ pic.twitter.com/JxzDBAKXuS
— KSRTC (@KSRTC_Journeys) October 19, 2022
ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



















































