ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕರತ್ನ ಪ್ರಶಸ್ತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಆರ್. ಅಶೋಕ್, ಡಾ. ಸುಧಾಕರ್, ಗೋಪಾಲಯ್ಯ, ಸುನಿಲ್ಕುಮಾರ್ , ಬೈರತಿ ಬಸವರಾಜ , ಅಶ್ವಿನಿ ಪುನಿತ್ ರಾಜಕುಮಾರ್ , ರಾಘವೇಂದ್ರ ರಾಜಕುಮಾರ್ ಹಾಜರಿದ್ದರು.



















































