ದೆಹಲಿ: ಎಐಸಿಸಿ ನೂತನ ಸಾರಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಕೆಲವದಿನಗಳ ಹಿಂದಷ್ಟೇ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಶಶಿ ತರೂರ್ ವಿರುದ್ದ ಜಯಗಳಿಸಿ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಮೂಲಕ 24 ವರ್ಷಗಳ ನಂತರ ಕಾಂಗ್ರೆಸ್ ನ ಉನ್ನತ ಹುದ್ದೆಗೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷರಾಗಿ ನೇಮಕವಾದರು.
ಪಕ್ಷದ ತೀರ್ಮಾನದಂತೆ, ಹಂಗಾಮಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಸರ್ಟಿಫಿಕೇಟ್ ಹಸ್ತಾಂತರಿಸಿದರು.
ಈ ನಡುವೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ತಮ್ಮನ್ನು ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಾಮಾನ್ಯ ಕಾರ್ಮಿಕನಾಗಿದ್ದ ತಮ್ಮನ್ಬು ಈ ಸ್ಥಾನದವರೆಗೂ ಕರೆತಂದ ನಾಯಕರಿಗೆ ಧನ್ಯವಾದ ಸಮರ್ಪಿಸಿದರು.

























































