ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿಬ್ ಕುಮಾರ್ ಕಟೀಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಸಂಕಲ್ಪ ಯಾತ್ರೆ ಮೂಲಕ ಪಕ್ಷದ ನಾಯಕರು ಭರ್ಜರಿ ಚಟುವಟಿಕೆಗಳಲ್ಲಿ ತೊಡಗಿದ್ದು ಬಿಜೆಪಿಯ ದಂಡನಾಯಕ ಸದ್ಯದ ಮಟ್ಟಿಗೆ ವೈದ್ಯರ ಸಲಹೆಯಂತೆ ರಾಜಕೀಯದಿಂದ ದೂರ ಉಳಿಯಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ನಳಿನ್ ಕುಮಾರ್ ಕಟೀಲ್, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದಿದ್ದಾರೆ.
ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ.
ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.
ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ.
— Nalinkumar Kateel (@nalinkateel) November 5, 2022
























































