ಬೆಂಗಳೂರು: ಬರೋಬ್ವರಿ 500 ಸಿನಿಮಾಗಳ ಸರದಾರ ಟಿ.ಎಸ್. ಲೋಹಿತಾಶ್ವ ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಎದೆನೋವಿನ ಕಾರಣದಿಂದ 80 ವರ್ಷದ ಲೋಹಿತಾಶ್ವ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರದ ಮೂಲಕ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಇಂಗ್ಲಿಷ್ ಪ್ರಾದ್ಯಾಪಕರಾಗಿದ್ದ ಲೀಹಿತಾಶ್ವ ಅವರು, ಚಿತ್ರ ನಟ, ನಾಟಕಕಾರರಾಗಿ ಸಿನಿಮಾ ಹಾಗೂ ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಇವರು, ನಾಡುಕಂಡ ಅನೇಕ ದಿಗ್ಗಜರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಲೋಹಿತಾಶ್ವ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ.



















































