ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘವು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ನ.13ರಂದು ಕಬ್ಬನ್ ಪಾರ್ಕ್‍ನಲ್ಲಿ `ಕನ್ನಡ ಹಬ್ಬ’ವನ್ನು ಆಚರಿಸುತ್ತಿದೆ. ಇದೇ ವೇಳೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಿಗೆ ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ಬಹುಮಾನವಾಗಿ ವಿತರಿಸಲಿದೆ.
ಭಾಗವಹಿಸುವ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆ ಹಾಗೂ ಎಲ್ಲರಿಗೂ ಸರ್ಟಿಫಿಕೇಟ್‍ಗಳನ್ನು ನೀಡಲಾಗುವುದು. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಇತರೆ ವಿದ್ಯಾಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಇದೇ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾಯಿತ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಾಗುವುದು. ಅತಿಥಿಗಳಾಗಿ ನಟಿ ಮತ್ತು ಮಾಡೆಲಿಂಗ್ ಸೋನಿಕಾ ಗೌಡ ಮತ್ತಿತರರು ಭಾಗವಹಿಸುವರು.
ಬೆಳಗ್ಗೆ 8 ಗಂಟೆಗೆ ರಂಗೋಲಿ ಸ್ಪರ್ಧೆ ಹಾಗೂ ಇತರೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ಮಧ್ಯಾಹ್ನ 3 ರವರೆಗೆ ನಡೆಯಲಿವೆ. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವವರು ಮೊಬೈಲ್: 98803 56178 ಸಂಖ್ಯೆಗೆ ಕರೆ ಮಾಡಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಎಂದು ಉಮೇಶ್ ತಿಳಿಸಿದ್ದಾರೆ.