ಬೆಂಗಳೂರು: ಮಂಗಳೂರಿನಲ್ಲಿ ಶನಿವಾರ ಆಟೋರಿಕ್ಷಾದಲ್ಲಿ ಸಂಭವಿಸಿರುವ ಸ್ಫೋಟದ ಘಟನೆಯ ಹಿಂದೆ ಭಯೋತ್ಪಾದನಾ ಕೃತ್ಯದ ವಾಸನೆ ಬಡಿದಿದೆ. ಈ ವಿಚಾರದಲ್ಲಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹಂಚಿಕೊಂಡಿರುವ ಮಾಹಿತಿ ಬಂದರು ನಗರಿ ಮಂಗಳೂರನ್ನು ಬೆಚ್ಚಿಬೀಳಿಸಿದೆ.
‘ಮಂಗಳೂರಿನಲ್ಲಿ ನಡೆದಿರುವುದು ಆಕಸ್ಮಿಕ ಘಟನೆಯಲ್ಲ, ಅದೊಂದು ಭಯೋತ್ಪಾದನಾ ಕೃತ್ಯ’ ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಟ್ವೀಟ್ ಮಾಡಿದ್ದಾರೆ. ಈ ಘಟನೆಯ ಬಗ್ಗೆ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.
It’s confirmed now. The blast is not accidental but an ACT OF TERROR with intention to cause serious damage. Karnataka State Police is probing deep into it along with central agencies. https://t.co/lmalCyq5F3
— DGP KARNATAKA (@DgpKarnataka) November 20, 2022
ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋ ರಿಕ್ಷಾ ಸ್ಫೋಟಗೊಂಡು ಚಾಲಕ ಮತ್ತು ಇನ್ನೊಬ್ಬ ಗಾಯಗೊಂಡಿದ್ದರು. ಚಲಿಸುತ್ತಿದ್ದ ಆಟೋ ರಿಕ್ಷಾ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದರಿಂದ ಜನ ಬೆಚ್ಚಿಬಿದ್ದಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಛಿದ್ರಗೊಂಡ ಕುಕ್ಕರ್ ಪತ್ತೆಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಕೈಗೊಂಡ ಪೊಲೀಸರು ಈ ಘಟನೆಯು ನಿಗೂಢ ಕೃತ್ಯವಾಗಿರಬಹುದೆಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ.. ಮಂಗಳೂರು ಬ್ಲಾಸ್ಟ್ ಹಿಂದೆ ಉಗ್ರರ ಕೃತ್ಯದ ಶಂಕೆಯಿದೆ ಎಂದ ಅರಗ ಜ್ಞಾನೇಂದ್ರ
ಈ ನಡುವೆ, ಮಂಗಳೂರು ಸ್ಫೋಟ ಪ್ರಕರಣ ಬಗ್ಗೆ ಎನ್ಐಎ ಕೂಡಾ ಮಾಹಿತಿ ಸಂಗ್ರಹಿಸುತ್ತಿದೆ. ಈ ಘಟನೆ ನಂತರ ಮಂಗಳೂರು ನಗರ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
























































