ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ನಡೆದ ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶ ಕಮಲ ಪಕ್ಷದ ಶಕ್ತಿಪ್ರದರ್ಶನಕ್ಕೆ ಸಾಕ್ಷಿಯಾಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪ್ರಲ್ಹಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಅದರಲ್ಲೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಾಕ್ ವೈಖರಿ ಸಮಾವೇಶದಲ್ಲಿ ಜಮಾಯಿಸಿದ್ದ ಜನಸಾಗರವನ್ನೇ ರೊಚ್ಚಿಗೆಬ್ಬಿಸಿತು.
ಜನಸ್ರವನ್ನುದ್ದೇಶಿಸಿ ಮಾತನಾಡಿದ ಸಿ.ಟಿ.ರವಿ, ಯಥಾ ಪ್ರಕಾರ ತಮ್ಮ ಸಾಂಪ್ರದಾಯಿಕ ಎದುರಾಳಿ ಪಕ್ಷದ ವಿರುದ್ದ ವಾಗ್ದಾಳಿ ನಡೆಸಿದರು. ಕೈ ನಾಯಕರ ಹಿಂದೂ ವಿರೋಧಿ ನಡೆ ಬಗ್ಗೆ ವಾಕ್ಛಾಟಿ ಪ್ರಯೋಗಿಸಿದರು.
ಇಲ್ಲಿ ಸೇರಿದ ಜನ ಬಂದಿರುವುದು ಅಭಿನಂದನೆ ಸಲ್ಲಿಸಲು. ಯಾವ ಸರ್ಕಾರಗಳು ಸಮುದಾಯದ ಕೂಗು ಕೇಳಿಸಿಕೊಳ್ಳದೇ ಮೀಸಲಾತಿಯನ್ನು ಹೆಚ್ಚಿಸಲಿಲ್ಲ. ಆದರೆ ಆ ಕೆಲಸ ಮಾಡಿದ್ದು ಬಿಜೆಪಿ ಮಾತ್ರ. ನಮ್ಮ ಪಕ್ಷ ಎಸ್ಟಿ ಸಮುದಾಯದ ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಿದೆ. ಕಾಂಗ್ರೆಸ್ ಸೇರಿ ವಿಪಕ್ಷಗಳು ಬಿಜೆಪಿ ದಲಿತ ವಿರೋಧಿ ಎಂದು ಆರೋಪಿಸಿದವು. ಆದರೆ ಅವರೆಂದಿಗೂ ಮೀಸಲಾತಿ ಹೆಚ್ಚಿಸಲ್ಲ. ಈ ಸಮುದಾಯಗಳನ್ನು ಎಂದಿಗೂ ಅಭಿವೃದ್ಧಿಯಾಗಲು ಬಿಡಲ್ಲ. ಆದರೆ ದಲಿತ, ಹಿಂದುಳಿದ ಸಮುದಾಯಗಳ ಪರ ಬಿಜೆಪಿ ಮಾತ್ರ ಇದೆ ಎಂದರು.
ನಮ್ಮ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೆ ಅದೇ ಕಾಂಗ್ರೆಸ್ ನವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಹೇಳುತ್ತಾರೆ. ಶಿವನ ಆವಾಸ ಸ್ಥಾನವಾದ ಕಪಾಲಿ ಬೆಟ್ಟವನ್ನು ಕೆಪಿಸಿಸಿ ಅಧ್ಯಕ್ಷರು ಕ್ರಿಸ್ತಬೆಟ್ಟ ಮಾಡಲು ಹೊರಟರು. ಇದರ ಪರಿಣಾಮ ಅವರಿಗೆ ಉನ್ನತ ಹುದ್ದೆ ಸಿಕ್ಕಿತು ಎಂದು ಸಿ.ಟಿ.ರವಿ ವಾಕ್ಪ್ರಹಾರ ಮಾಡಿದರು. ರವಿ ಅವರ ವೀರಾವೇಶದ ಭಾಷಣದುದ್ದಕ್ಕೂ ಜನಸಾಗರದ ನಡುವೆ ಜೈಕಾರ ನೊಳಗುತ್ತಲೇ ಇತ್ತು.
ರಾಮ ಕಾಲ್ಪನಿಕ ವ್ಯಕ್ತಿ ಎಂದಿತ್ತು ಕಾಂಗ್ರೆಸ್. ರಾಮ ಇಲ್ಲ ಅಂದ್ರೆ ರಾಮಾಯಣ ಇಲ್ಲ, ಆಂಜಯನೇಯ ಇಲ್ಲ. ತಳಬುಡ ಇಲ್ಲದೆ ಪ್ರಶ್ನೆ ಮಾಡೋದು ಕಾಂಗ್ರೆಸ್‌ನ ಸಂಸ್ಕಾರ. ವೀರ ಮದಕರಿಯನ್ನು ಕೊಂದದ್ದು ಕಾಂಗ್ರೆಸ್ ಪೂಜಿಸುವ ಟಿಪ್ಪುವಿನ ಅಪ್ಪ.
– ಶ್ರೀ @CTRavi_BJP, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ #BJPNavashaktiSamavesha pic.twitter.com/GMxb0pXQhn
— BJP Karnataka (@BJP4Karnataka) November 20, 2022
ಕಾಂಗ್ರೆಸ್ ನವರಿಗೆ ಕುಂಕುಮ ಕಂಡರೆ ಆಗಲ್ಲ. ಕೇಸರಿ ಕಂಡರೆ ಆಗಲ್ಲ. ಅಂತವರಿಗೆ ಮತ ಹಾಕಬೇಡಿ. ಕಾಂಗ್ರೆಸ್ ಮತಾಂತರಕ್ಕೆ ಕುಮ್ಮಕ್ಕು ನೀಡುವ ಪಕ್ಷ ಎಂದರು. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದು ಕಾಂಗ್ರೆಸ್. ಹನುಮಂತನ ಅಸ್ತಿತ್ವ ಪ್ರಶ್ನಿಸಿತು. ರಾಮಾಯಣ ಕಾಲ್ಪನಿಕ ಎಂದು ಹೇಳಿತು. ಮತ್ತೊಬ್ಬ ಹೇಳ್ತಾನೆ ಹಿಂದೂ ಎಂದರೆ ಕೆಟ್ಟ ಶಬ್ದವಂತೆ. ವಿಜಯನಗರ ಸಾಮ್ರಾಜ್ಯದ ಸ್ಥಾಪಿಸುವಲ್ಲಿ ನಾಯಕ ಸಮುದಾಯದ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಇಂದು ಗಂಡುಗಲಿ ಕುಮಾರರಾಮ, ಮದಕರಿ ನಾಯಕನ ವಿರುದ್ಧ ಇದೆ. ಮದಕರಿ ನಾಯಕನನ್ನು ಮೋಸದಿಂದ ಕೊಂದ ಟಿಪ್ಪುನ ಪರ ಕಾಂಗ್ರೆಸ್ ಇದೆ. ಇಂತವರಿಗೆ ಮತ ಹಾಕಬೇಕೆ ಎಂದು ಯೋಚಿಸಬೇಕಿದೆ ಎಂದು ಸಿ.ಟಿ.ರವಿ ಹೇಳಿದಾಗ ನೆರೆದಿದ್ದ ಜನಸ್ತೋಮವು ಬಿಜೆಪಿ ಪರ ಜೈಕಾರ ಹಾಕಿತು.

ಕಾಂಗ್ರೆಸ್ ನವರಿಗೆ ಕೇಸರಿ ಕಂಡರೆ, ಕುಂಕುಮ ಕಂಡರೆ, ಹಿಂದೂ ಶಬ್ದ ಕೇಳಿದರೆ ಆಗಲ್ಲ. ಇಂತಹ ಪಕ್ಷಕ್ಕಡ ಉತ್ತರ ಪ್ರದೇಶದಲ್ಲಿ ಠೇವಣಿ ಕಳೆದುಕೊಳ್ಳುವಂತೆ ಅಲ್ಲಿನ ಜನ ಉತ್ತರ ನೀಡಿದ್ದಾರೆ. ರಾಮನ ಜೊತೆಗೆ ಹನುಮ ಇದ್ದಂತೆ ಉತ್ತರ ಪ್ರದೇಶದ ರಾಮ ಕರ್ನಾಟಕದ ಹನುಮ ಜೊತೆ ಇರಬೇಕು. ಅಲ್ಲಿ ಭಾಜಪಾ ಸರ್ಕಾರ ಇರುವಂತೆ ಬರುವ ದಿನದಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳುವಂತೆ ಮಾಡಿ ಬಿಜೆಪಿಗೆ ಅಧಿಕಾರ ನೀಡಬೇಕು ಎಂದಾಗಲೂ ಜನಸ್ತೋಮ ಜೈಕಾರ ಹಾಕಿತು.
ರಾಹುಲ್ ಗಾಂಧಿ ಯಾತ್ರೆ ಮಾಡಿದ ಪರಿಣಾಮ ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಗೆದ್ದಿದೆ. ರಾಹುಲ್ ಹೋದೆಡೆ ಕಾಂಗ್ರೆಸ್ ಧೂಳೀಪಟವಾಗಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅವರದು ಐರನ್ ಲೆಗ್ ಎಂದು ರವಿ ವ್ಯಂಗ್ಯವಾಡಿದರು.
ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಹಾಗೂ ಸಮಾವೇಶದ ಸ್ಥಳವನ್ನು ಪಕ್ಷದ ಬಾವುಟ ಹಾಗೂ ಪ್ಲೆಕ್ಸ್‍ಗಳಿಂದ ಅಲಕೃಂತಗೊಳಿಸಲಾಗಿತ್ತು. ವಿವಿಧ ಕಲಾ ತಂಡಗಳ ಕಾರ್ಯಕ್ರಮ ಜನರ ಮನ ಸೆಳೆಯಿತು.



















































