ಬೆಂಗಳೂರು: ರಾಜ್ಯದಲ್ಲಿನ್ನು ಒಂದೇ ಮಾದರಿಯ ಭುವನೇಶ್ವರಿ ಮೂರ್ತಿ ಬಳಕೆ ಸಂಬಂಧ ಸರ್ಕಾರ ಹೆಜ್ಜೆ ಇಟ್ಟಿದೆ. ಈ ವರೆಗೂ ಬಗೆಬಗೆ ಮಾದರಿಯಲ್ಲಿ ಕನ್ನಡಾಂಬೆಯ ಚಿತ್ರ ಬಳಕೆಯಾಗುತ್ತಿತ್ತು. ಈ ಕುರಿತಂತೆ ಅಲಿತಕಲಾ ಅಕಾಡೆಮಿ ಪ್ರಮುಖರೂ ಸೇರಿದಂತೆ ಗಣ್ಯರ ಸಲಹೆಯಂತೆ ಏಕರೂಪದ ಭುವನೇಶ್ವರಿ ಚಿತ್ರ ಬಳಕೆಯ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಾಗಿ ಚಿತ್ರಿಸಿರಿವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಅವಶ್ಯಕವಾಗಿತ್ತು.ಈ ಹಿನ್ನಲೆಯಲ್ಲಿ ನಾಡದೇವತೆಯ ಪ್ರಮಾಣಿತ ಮತ್ತು ಅಧಿಕೃತ ಚಿತ್ರ ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಶ್ರೀ ಡಿ.ಮಹೇಂದ್ರರವರ ನೇತೃತ್ವದಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
ನೇತೃತ್ವದಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಆಯ್ಕೆ ಮಾಡಿ ಶಿಫಾರಸ್ಸು ಮಾಡುವ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಲು ಹಾಗೂ ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.2/2
— Sunil Kumar Karkala (Modi Ka Parivar) (@karkalasunil) November 21, 2022
ಈ ಸಮಿತಿ ಆಯ್ಕೆ ಮಾಡಿ ಶಿಫಾರಸ್ಸು ಮಾಡುವ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಲು ಹಾಗೂ ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.



















































