ಬೆಂಗಳೂರು: ಬೆಳಗಾವಿ ಗಡಿ ವಿವಾದವನ್ನು ಕೆದಕುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ತಕ್ಕ ಉತ್ತರ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಕಸರತ್ತು ನಡೆಸುತ್ತಿದ್ದಾರೆ. ಈ ಸಂಬಂಧ ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯುವುದಾಗಿ ಅವರು ತಿಳಿಸಿದ್ದಾರೆ.
‘ನಾವು ಸರ್ವ ಪಕ್ಷಗಳ ಸಭೆ ಹಾಗೂ ಗಡಿ ಪ್ರಾಧಿಕಾರದಲ್ಲಿ ಕೈಗೊಂಡ ನಿರ್ಣಯಗಳಿಗೆ ಬದ್ಧರಾಗಿದ್ದೇವೆ. ಇನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣವನ್ನು ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತೇವೆ’ ಎಂದವರು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ, ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಇರುವಾಗಲೇ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರು ಮಾಧ್ಯಮದ ಸಭೆ ಕರೆಸಿ, ಸುಪ್ರೀಂ ಕೋರ್ಟ್ ನಲ್ಲಿ ದಾವೆ ಇರುವಾಗಲೇ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ ಎಂದು ತಿಳಿಸಿದ್ದಾರೆ.
1/2 pic.twitter.com/b1lVqIsg34— Basavaraj S Bommai (Modi Ka Parivar) (@BSBommai) November 24, 2022




































































