ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಿಂದ ಕಡತಗಳು ನಾಪತ್ತೆಯಾಗಿದೆ ಎಂಬ ಚರ್ಚೆ ನಡೆದಿರುವಾಗಲೇ ಆಡಳಿತಾರೂಢ ಬಿಜೆಪಿ ಈ ಬೆಳವಣಿಗೆ ಬಗ್ಗೆ ಸ್ಪಷ್ಟನೆ ನೀಡಿದೆ
‘ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಕಡತಗಳು ನಾಪತ್ತೆಯಾಗಿವೆ ಎಂಬ ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಮತ್ತು ಸುಳ್ಳು ಎಂದು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದರ.
‘ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆಯಂತೆ ಸಿದ್ದರಾಮಯ್ಯ ವರ್ತಿಸುತ್ತಿರುವುದು ನಾಚಿಗೆಗೇಡಿನ ಸಂಗತಿ’ ಎಂದು ಟ್ವಿಟರ್ ಮೂಲಕ ಬಿಜೆಪಿ ಸಿದ್ದರಾಮಯ್ಯ ಅವರಿಗೆ ಗುದ್ದುಕೊಟ್ಟಿದೆ.
ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಎಲ್ಲ ಕಡತಗಳು (ಮುಖ್ಯ ಕಡತ, ಭಾಗ 1, 3 ಮತ್ತು 4) ನಗರಾಭಿವೃದ್ಧಿ ಇಲಾಖೆಯಲ್ಲಿವೆ.
ಕಡತಗಳು ಯಾವುದೇ ಸಚಿವರ ಕಚೇರಿ ಅಥವಾ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಣೆಯಾಗಿಲ್ಲ ಅಥವಾ ತಪ್ಪಿಹೋಗಿಲ್ಲ.
ಕಾಂಗ್ರೆಸ್ ಜನತೆಯ ಹಾದಿ ತಪ್ಪಿಸಲು ಪ್ರಯತ್ನಿಸಿರುವುದಕ್ಕೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು.
— BJP Karnataka (@BJP4Karnataka) November 27, 2022
ಬಿಬಿಎಂಪಿ ಜಾಹೀರಾತು ನೀತಿಗೆ ಸಂಬಂಧಿಸಿದ ಎಲ್ಲ ಕಡತಗಳು (ಮುಖ್ಯ ಕಡತ, ಭಾಗ 1, 3 ಮತ್ತು 4) ನಗರಾಭಿವೃದ್ಧಿ ಇಲಾಖೆಯಲ್ಲಿವೆ. ಕಡತಗಳು ಯಾವುದೇ ಸಚಿವರ ಕಚೇರಿ ಅಥವಾ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಣೆಯಾಗಿಲ್ಲ ಅಥವಾ ತಪ್ಪಿಹೋಗಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ಜನತೆಯ ಹಾದಿ ತಪ್ಪಿಸಲು ಪ್ರಯತ್ನಿಸಿರುವುದಕ್ಕೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.






























































