ಶಿಮ್ಲಾ: ಗುಜರಾತ್‌ನಲ್ಲಿ ಬಿಜೆಪಿ ದೆವ್ವ ಜಯ ಸಾಧಿಸಿದರೆ ಇಬ್ನೊಂದೆಡೆ ಹಿಮಾಚಲ ಪ್ರದೇಶದಲ್ಲಿ ಹೀನಾಯ ಸೋಲುಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೆಲೆಯಲ್ಲೇ ಬಿಜೆಪಿ ಅಧಿಕಾರ ಕಳೆದುಕೊಂಡಿರುವುದು ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ ಮೂರು ಸ್ಥಾನಗಳು ಇತರರ ಪಾಲಾಗಿವೆ.
ಬಿಜೆಪಿ ಅಧಿಕಾರದಲ್ಲಿದ್ದ ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ರಚಿಸಲು ಸಿದ್ದತೆ ನಡೆದಿದ್ದು, ಕೈ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ.