ಬೆಂಗಳೂರು: ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್‌ಆರ್‌ಪಿ ದರಕೆ ಹೆಚ್ಚುವರಿಯಾಗಿ ಟನಗೆ 50 ರೂಪಾಯಿ ನೀಡಲು ಹೊರಡಿಸಿರುವ ಆದೇಶ ಸರರಿಯಿಲ್ಲ ಎನ್ನುತ್ತಾ ತಲೆ ಮೇಲೆ ಕಬ್ಬಿನ ಜಲ್ಲೆಗಳನ್ನು ಹೊತ್ತು ಆದೇಶವನ್ನು ಸುಟ್ಟು ಬೂದಿ ಮಾಡಿ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿ ಹಣ ಕೊಡಿಸಲು ಸರ್ಕಾರಕ್ಕೆ ಧೈರ್ಯವಿಲ್ಲದಿದ್ದರೆ ಕಬ್ಬು ಬೆಳೆಗಾರರ ವಹಿವಾಟಿನಿಂದ ಸರ್ಕಾರಕ್ಕೆ ಬರುವ ತೆರಿಗೆ 5,000 ಕೋಟಿ ಹಣದಿಂದ ಹೆಚ್ಚುವರಿ ಹಣ ನೀಡಲಿ, ಹಿಂದೆ ಬೆಳಗಾವಿ ಅಧಿವೇಶನದ ವೇಳೆ ರೈತನೊಬ್ಬ ಪ್ರಾಣ ಕಳೆದುಕೊಂಡಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಟನ್ ಗೆ 160 ಹೆಚ್ಚುವರಿ ಹಣ ಘೋಷಣೆ ಮಾಡಿ 1600 ಕೋಟಿ ರೈತರಿಗೆ ನೀಡಿದ್ದಾರೆ. ಅದರಂತೆ ಪ್ರಸಕ್ತ ಸರ್ಕಾರವು ನೀಡಲಿ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು
ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚವನ್ನು ಹಿಂದಿನ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ ಪ್ರತಿ ಟನಗೆ 200 ರಿಂದ 300 ರೈತರ ಹಣದಲ್ಲಿ ಮುರಿದು ಕೊಳ್ಳುತ್ತಿದ್ದಾರೆ, ಇದನ್ನು ಕಡಿಮೆ ಮಾಡಲು ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡಲಿ ಎಂದು ಆಗ್ರಹಿಸಿದ ಅವರು, ಕಬ್ಬಿನಿಂದ ಬರುವ ಸಕ್ಕರೆ ಇಳುವರಿಯನ್ನ ಸಕ್ಕರೆ ಕಾರ್ಖಾನೆಗಳೆ ಪರೀಕ್ಷೆ ಮಾಡಿ ವರದಿ ನೀಡುವ ಕಾರಣ ರೈತರಿಗೆ ವಂಚನೆಯಾಗುತ್ತಿದೆ ಇದನ್ನು ತಪ್ಪಿಸಲಿ. ಕಬ್ಬಿನಿಂದ ಬರುವ ಯಥನಾಲ್ ಉತ್ಪನ್ ದ ಲಾಭಾಂಶ ಮಾತ್ರ ಏಕೆ, ಮೊಲಾಸಿಸ್ ಬಗ್ಯಾಸ್ ಮಡ್ಡಿ ಸಕ್ಕರೆ ಉತ್ಪನ್ನಗಳ ಲಾಭವನ್ನು ಪರಿಗಣಿಸಿ ಉತ್ಪಾದನೆಗೆ ತಗಲುವ ಖರ್ಚನ್ನ ಕಳೆದು ರೈತರಿಗೆ ಹೆಚ್ಚುವರಿ ಹಣ ನಿಗದಿ ಮಾಡಲಿ ಎಂದರು.
ಎತನಾಲ್ ನಿಂದ ಹೆಚ್ಚುವರಿ 50 ಕೊಡುತ್ತೇವೆ ಎಂದರೆ ರೈತರಿಗೆ ಕೊಡುವುದು ಭಿಕ್ಷೆಯಲ್ಲ, ಕಬ್ಬು ಬೆಳೆದ ರೈತ ಸಾಲದ ಬಲೆಯಲ್ಲಿ ಬೀಳುತ್ತಿದ್ದಾನೆ, ಕಬ್ಬುನುರಿಸುವ ಕಾರ್ಖಾನೆ ಮಾಲೀಕ ಪ್ರತಿವರ್ಷ ಹೊಸ ಹೊಸ ಕಾರ್ಖಾನೆ ಮಾಡುತ್ತಿದ್ದಾನೆ, ಯಥನಾಲ್ ಉತ್ಪಾದನೆ ಮಾಡುವ ಕಾರ್ಖಾನೆಗಳ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 50 ರೂ ಎನ್ನುವ ನೀತಿ ರೈತರನ್ನು ಹೊಡೆದಾಳುವ ಕ್ರಮವಾಗಿದೆ. ಎಂದ ಅವರು, ಇದೆ ತಿಂಗಳ ಹನ್ನೊಂದನೇ ತಾರೀಕು ತಮಿಳುನಾಡು, ಕೇರಳ, ಆಂಧ್ರ, ರಾಜ್ಯಗಳ ರೈತ ಮುಖಂಡರು ಬೆಂಗಳೂರಿನ ಧರಣಿ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಲಿದ್ದಾರೆ ಅನಿವಾರ್ಯವಾದರೆ ಸಾವಿರಾರು ಸಂಖ್ಯೆ ರೈತರು ಬೆಂಗಳೂರಿಗೆ ಬರಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.























































