ಬೆಂಗಳೂರು: ಯಾರದ್ದೋ ಬೇಳೆ ಬೇಯಿಸಿಕೊಳ್ಳುವುದಕ್ಕೋಸ್ಕರ ಸಾಮಾನ್ಯ ಜನರ ಜೀವನ ಹಾಳು ಮಾಡುವುದು ಸರಿಯಲ್ಲ ಎಂದು ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರದಲ್ಲಿನ ನಾಯಕರು ತಗಾದೆ ತೆಗೆದಿದ್ದಾರೆ. ಅಲ್ಲಿನ ಸಚಿವರು ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿ ಕನ್ನಡಿಗರನ್ನು ಕೆರಳುವಂತೆ ಮಾಡಿದ್ದಾರೆ. ಗಡಿ ವಿಚಾರದಲ್ಲಿ ರಾಜಕೀಯ ಜಟಾಪಟಿಯೂ ನಡೆದಿದ್ದು ಈ ಬೆಳವಣಿಗೆ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಶಿವರಾಜ್ ಕುಮಾರ್, ಯಾರದ್ದೋ ಬೇಳೆ ಬೇಯಿಸಿಕೊಳ್ಳುವುದಕ್ಕೋಸ್ಕರ ಸಾಮಾನ್ಯ ಜನರ ಜೀವನ ಹಾಳು ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.























































