ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ‘ಪಂಚರತ್ನ’ ಯಾತ್ರೆಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತುಮಕೂರು ಜಿಲ್ಲೆ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಈ ಕಾರಣಕ್ಕೆ ಇದೇ ಡಿ.11ರಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು 4 ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ.
ಪರಿಷ್ಕೃತ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ನೀಡಲಾಗಿದೆ.2/2#ಪಂಚರತ್ನ_ರಥಯಾತ್ರೆ pic.twitter.com/hX6vqCpFHb
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2022
























































